Friday, June 5, 2026
Homeಕರಾವಳಿಉಡುಪಿಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದಾಗ ಹೃದಯಾಘಾತವಾಗಿ ವ್ಯಕ್ತಿ ಸಾವು

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದಾಗ ಹೃದಯಾಘಾತವಾಗಿ ವ್ಯಕ್ತಿ ಸಾವು

- Advertisement -
- Advertisement -

ಉಡುಪಿ: ಸಾವು ಯಾವಾಗ ರೂಪದಲ್ಲಿ ಬರುತ್ತದೆ ಎಂದು ಹೇಳೋದಕ್ಕೆ ಸಾಧ್ಯಾನೇ ಇಲ್ಲ.  ಅದೇ ರೀತಿ ಮೆಹಂದಿ ಕಾರ್ಯಕ್ರಮೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ  ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಉಡುಪಿಯ ಅಂಬಾಗಿಲಿನ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತ ದುರ್ದೈವಿ.

ಜೂ.21 ರಾತ್ರಿ ನೆರೆಮನೆಯ ಸಂಬಂಧಿಕರ ಮೆಹೆಂದಿ ಕಾರ್ಯಕ್ರಮದಲ್ಲಿ ಇತರರೊಂದಿಗೆ ಗಣಪತಿ ಆಚಾರ್ಯ ನೃತ್ಯ ಮಾಡುತ್ತಿದ್ದರು. ಈ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಇವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಚಿನ್ನದ ಆಭರಣ ತಯಾರಿಕೆ ವೃತ್ತಿ ನಡೆಸುತ್ತಿದ್ದ ಗಣಪತಿ ಆಚಾರ್ಯ, ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕಾರರಾಗಿಯೂ ಕಾರ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.

- Advertisement -

Latest News

error: Content is protected !!