Wednesday, June 3, 2026
Homeಕರಾವಳಿಮಂಗಳೂರು; ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವು

ಮಂಗಳೂರು; ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು: ಹಗ್ಗಜಗ್ಗಾಟದಲ್ಲಿ ಗೆದ್ದ ಖುಷಿಯಲ್ಲಿದ್ದಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಜೆಪ್ಪುವಿನಲ್ಲಿ ನಡೆದಿದೆ. ಕುಶಲನಾಥ ಶೆಟ್ಟಿ(50) ಮೃತ ದುರ್ದೈವಿ.

ಜೆಪ್ಪು ಬಂಟರ ಸಂಘದ ವತಿಯಿಂದ ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕುಶಲನಾಥ ಶೆಟ್ಟಿ(50)  ಪಾಲ್ಗೊಂಡಿದ್ದರು.  ಸ್ಪರ್ಧೆಯಲ್ಲಿ ಅವರಿದ್ದ ತಂಡ ಗೆಲುವು ಸಾಧಿಸಿತ್ತು, ಸ್ಪರ್ಧೆಯ ಬಳಿಕ ಕುಳಿತಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿತು, ಹಾಗೂ ವಾಂತಿ ಮಾಡಿಕೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!