Friday, June 5, 2026
HomeUncategorizedಪುತ್ತೂರು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಪುತ್ತೂರು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಪುತ್ತೂರು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ದಿ.ಅಣ್ಣಯ್ಯ ನಾಯ್ಕ ಎಂಬವರ ಪುತ್ರ ಕೃಷ್ಣಪ್ಪ(55) ಮೃತಪಟ್ಟ ವ್ಯಕ್ತಿ.

ಅವರು ತನ್ನ ಮನೆಯ ಹತ್ತಿರದ ತೋಟದಲ್ಲಿ ಶುಕ್ರವಾರ ಮರವೊಂದಕ್ಕೆ ಹತ್ತಿ ಅದರ ಕೊಂಬೆ ಕಡಿಯುತ್ತಿದ್ದಾಗ ಆಯತಪ್ಪಿ ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!