Saturday, June 6, 2026
Homeಕರಾವಳಿಚಾರ್ಮಾಡಿಯಲ್ಲಿ ನದಿಗೆ ಬಿದ್ದಿದ್ದ ವ್ಯಕ್ತಿ ಸಾವು

ಚಾರ್ಮಾಡಿಯಲ್ಲಿ ನದಿಗೆ ಬಿದ್ದಿದ್ದ ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ: ಎರಡು ದಿನಗಳ ಹಿಂದೆ ಆಕಸ್ಮಿಕವಾಗಿ ನದಿಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿ ಕೊಳಂಬೆ ಪಾದೆ ಮನೆ ನಿವಾಸಿ ಧರ್ಣಪ್ಪ ಪೂಜಾರಿ(50) ಮೃತ ದುರ್ದೈವಿ.

ಧರ್ಣಪ್ಪ ಜ.23ರಂದು ಕಕ್ಕಿಂಜೆ ಪೇಟೆಯಿಂದ ಸಾಮಾಗ್ರಿಗಳನ್ನು ಖರೀದಿಸಿ ಮನೆಗೆ ಬರುತ್ತಿದ್ದಾಗ ಮನೆಯ ಸಮೀಪದ ನದಿ ದಾಟುವಾಗ ಆಕಸ್ಮಿಕವಾಗಿ ನದಿಗೆ ಬಿದ್ದಿದ್ದಾರೆನ್ನಲಾಗಿದೆ.ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!