Thursday, June 25, 2026
Homeಕರಾವಳಿವಿಟ್ಲ: ಕೆಎಸ್ ಆರ್ ಟಿಸಿ ಬಸ್ ನಿಂದ ವ್ಯಕ್ತಿ ಎಸೆಯಲ್ಪಟ್ಟ ಪ್ರಕರಣ; ಚಿಕಿತ್ಸೆ ಫಲಿಸದೆ ವ್ಯಕ್ತಿ...

ವಿಟ್ಲ: ಕೆಎಸ್ ಆರ್ ಟಿಸಿ ಬಸ್ ನಿಂದ ವ್ಯಕ್ತಿ ಎಸೆಯಲ್ಪಟ್ಟ ಪ್ರಕರಣ; ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

- Advertisement -
- Advertisement -

ವಿಟ್ಲ ; ಮೂರು ದಿನಗಳ ಹಿಂದೆ ವಿಟ್ಲದಲ್ಲಿ  ಕೆಎಸ್‌ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಿಸದೇ ಸಾವನಪ್ಪಿದ್ದಾರೆ.  ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಮೃತ ದುರ್ದೈವಿ.

ಇವರು ಸೆಪ್ಟೆಂಬರ್ 15 ರಂದು ವಿಟ್ಲ ಪೇಟೆಯಿಂದ ಮನೆಗೆ ವಿಟ್ಲ ಪಕಳಕುಂಜ ಕೆ.ಎಸ್.ಆರ್.ಟಿ.ಸಿ ಬಸ್ಸಲ್ಲಿ ತೆರಳುತ್ತಿದ್ದರು. ಈ ವೇಳೆ ಕೆದುವಾರು ಎಂಬಲ್ಲಿ ಬಸ್ ಸ್ಟಾಪ್‌ನಲ್ಲಿ ಇಳಿಯಲು ಎದ್ದು ನಿಂತಾಗ ಚಾಲಕ ತಿರುವು ರಸ್ತೆಯಲ್ಲಿ ಒಮ್ಮೆಲೇ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿದ್ದರಿಂದ ಬಸ್ಸಿನ ಹಿಂಬದಿಯ ಬಾಗಿಲಿನಿಂದ ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ಇನಾಸ್ ಅವರ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯವಾಗಿತ್ತು.

ಹೀಗಾಗಿ ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನಿನ್ನೆ ಸಾವನ್ನಪ್ಪಿದ್ದಾರೆ..

- Advertisement -

Latest News

error: Content is protected !!