Saturday, June 6, 2026
Homeಕರಾವಳಿಬಂಟ್ವಾಳ; ಪುಂಜಾಲಕಟ್ಟೆಯಲ್ಲಿ ಲಾರಿ ಮತ್ತು ಪಿಕಪ್ ನಡುವೆ ಅಪಘಾತ ಪ್ರಕರಣ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಬಂಟ್ವಾಳ; ಪುಂಜಾಲಕಟ್ಟೆಯಲ್ಲಿ ಲಾರಿ ಮತ್ತು ಪಿಕಪ್ ನಡುವೆ ಅಪಘಾತ ಪ್ರಕರಣ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಬಂಟ್ವಾಳ;  ನಿನ್ನೆ ಪುಂಜಾಲಕಟ್ಟೆಯಲ್ಲಿ ಲಾರಿ ಮತ್ತು ಪಿಕಪ್ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ಮೂವರ ಪೈಕಿ ಒಬ್ಬರು ಸಾವನ್ನಪ್ಪಿದ್ದಾರೆ. ಪಾಂಡವರಕಲ್ಲು ನಿವಾಸಿ ಪಿಕಪ್ ವಾಹನ‌ ಚಾಲಕ ಶಾಹಿಲ್ ಮೃತರು.

ಅವಿನಾಶ್ ಹಾಗೂ ಲಾರಿ ಚಾಲಕ ಧನರಾಜ್ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಲಾರಿ ಪುಂಜಾಲಕಟ್ಟೆಯಿಂದ ವಗ್ಗ ಕಡೆಗೆ ಹೋಗುವ ಪಿಕಪ್ ವಾಹನಕ್ಕೆ ಪುಂಜಾಲಕಟ್ಟೆ ಪ್ರಗತಿ ಆಸ್ಪತ್ರೆ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪಿಕಪ್ ವಾಹನದಲ್ಲಿದ್ದ ಇಬ್ಬರು ಹಾಗೂ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು.

- Advertisement -

Latest News

error: Content is protected !!