Thursday, July 16, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ 31 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ ಪಿ.ಜೆ.(52) ಮೃತಪಟ್ಟವರು. ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.

ಕೋಮಾದಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ,ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಕೃಷಿಕರಾಗಿದ್ದ ಅವರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!