Sunday, June 7, 2026
Homeಕರಾವಳಿಸುಳ್ಯ : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಸುಳ್ಯ : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ಸುಳ್ಯ : ಬೈಕ್ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ  ಬೈಕ್ ಸವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಸುಳ್ಯದಲ್ಲಿ ನಡೆದಿದೆ.

ಎರಡು ವಾರಗಳ ಹಿಂದೆ ರಾತ್ರಿ ಶ್ರೀರಾಂಪೇಟೆಯ ಸುಳ್ಯ ಸರ್ಕಾರಿ ಆಸ್ಪತ್ರೆ ಎದುರುಗಡೆ ಮೇನಾಲದ ವಿಷ್ಣುಪ್ರಸಾದ್ ಅವರ ಬೈಕ್  ಹಾಗೂ ಬೊಳುಗಲ್ಲಿನ ಯುವಕ ಚಲಾಯಿಸಿಕೊಂಡು ಬರುತ್ತಿದ್ದ ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು.

ಡಿಕ್ಕಿಯ ರಭಸಕ್ಕೆ ವಿಷ್ಣುಪ್ರಸಾದ್ ಮೇನಾಲರವರ ಕೈಕಾಲು ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿತ್ತು.  ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

- Advertisement -

Latest News

error: Content is protected !!