Friday, June 27, 2025
Homeಕರಾವಳಿಮಂಗಳೂರುಕಡಬ: ರಸ್ತೆ ಬದಿ ನಿಂತಿದ್ದ ವೃದ್ಧರೊಬ್ಬರಿಗೆ ಸ್ಕೂಟರ್ ಡಿಕ್ಕಿ: ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಕಡಬ: ರಸ್ತೆ ಬದಿ ನಿಂತಿದ್ದ ವೃದ್ಧರೊಬ್ಬರಿಗೆ ಸ್ಕೂಟರ್ ಡಿಕ್ಕಿ: ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

spot_img
- Advertisement -
- Advertisement -

ಕಡಬ: ರಸ್ತೆ ಬದಿ ನಿಂತಿದ್ದ ವೃದ್ಧರೊಬ್ಬರಿಗೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೋಡಿಂಬಾಳದಲ್ಲಿ ನಡೆದಿದೆ. ಹುಕ್ರ (75) ಮೃತ ದುರ್ದೈವಿ.

ಹುಕ್ರ ಅವರು ರಸ್ತೆ ದಾಟಲು ಕೋಡಿಂಬಾಳದ ಶಾಮಿಯಾನ ಅಂಗಡಿಯೊಂದರ ಬಳಿ ನಿಂತಿದ್ದರು. ಈ ವೇಳೆ ಮಹಮ್ಮದ್  ನೌಫಾಲ್ ಎಂಬಾತ ಚಲಾಯಿಸುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಅವರಿಗೆ ಕೂಡಲೇ ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ  ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!