Saturday, June 6, 2026
Homeಕರಾವಳಿಮಂಗಳೂರುಕಡಬ; ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಕಡಬ; ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಕಡಬ; ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ಸಾಬುಮೋನು ಕೆ.ಇ.(53) ಮೃತರು.

ಸಾಬುಮೋನು ಅವರು ಮಾ.16ರಂದು ಸಂಜೆ ಕೊಕ್ಕಡ ಪೇಟೆಗೆ ಬಂದವರು ಮನೆಗೆ ಬೇಕಾದ ಸಾಮಾಗ್ರಿಗಳನ್ನು ಖರೀದಿಸಿ ಮತ್ತೆ ಮನೆ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ  ಕಾಪಿನಬಾಗಿಲು ಎಂಬಲ್ಲಿಗೆ ತಲುಪುತ್ತಿದ್ದಂತೆ ಕೊಕ್ಕಡ ಕಡೆಯಿಂದ ಮಹೇಶ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್  ಡಿಕ್ಕಿಯಾಗಿದೆ.

ಪರಿಣಾಮ ರಸ್ತೆಗೆ ಬಿದ್ದ ಸಾಬುಮೋನು ಅವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಅವರನ್ನು ಉಪಚರಿಸಿ ನೆಲ್ಯಾಡಿ ಖಾಸಗಿ  ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!