- Advertisement -
![]()
- Advertisement -
ಮಂಗಳೂರು: ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48) ಮೃತ ವ್ಯಕ್ತಿ.
ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ಲೋಕೇಶ್ ಅವರು ಆ.15ರಂದು ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ ದಾಟುವ ವೇಳೆ ಮೋಟಾರ್ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಗೆ ದಾಖ ಲಾಗಿದ್ದರು. ಘಟನೆಗೆ ಸಂಬಂಧಿಸಿ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತ ಲೋಕೇಶ್ ಪತ್ನಿ, ಮಗಳನ್ನು ಅಗಲಿದ್ದಾರೆ.
- Advertisement -


