Thursday, June 4, 2026
Homeಕರಾವಳಿಉಡುಪಿಕುಂದಾಪುರ;ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಕುಂದಾಪುರ;ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಕುಂದಾಪುರ;ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರೆಗಾರ್(42) ಮೃತ ದುರ್ದೈವಿ.

ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ ಅವರ ಮೇಲೆ ಭಾನುವಾರ ಸಂಜೆ ಸುಮಾರು 7 ಗಂಟೆಗೆ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಚೂರಿಯಲ್ಲಿ ಇರಿದು ಪರಾರಿಯಾಗಿದ್ದ.ಗಂಭೀರಗೊಂಡಿದ್ದ ರಾಘುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಆರೋಪಿಯನ್ನು ತೀರ್ಥಹಳ್ಳಿ ಮೂಲದ ಶಾಫಿ ಎಂದು ಗುರುತಿಸಲಾಗಿದ್ದು, ಕೆಲವು ದಿನಗಳಿಂದ ಕುಂದಾಪುರದ ಲಾಡ್ಜ್ ಒಂದರಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕೊಲೆಯಾದ ರಾಘವೇಂದ್ರ ಹಾಗೂ ಆರೋಪಿ ಶಾಫಿ ನಡುವಿನ ಹಣಕಾಸಿನ ವ್ಯವಹಾರ ಕೊಲೆಗೆ ಕಾರಣ ಎನ್ನಲಾಗಿದೆ.

- Advertisement -

Latest News

error: Content is protected !!