Sunday, June 7, 2026
Homeಕರಾವಳಿಮಂಗಳೂರುಪುತ್ತೂರು; ರಸ್ತೆಯಲ್ಲಿ ನಿಲ್ಲಿಸಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು

ಪುತ್ತೂರು; ರಸ್ತೆಯಲ್ಲಿ ನಿಲ್ಲಿಸಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು

- Advertisement -
- Advertisement -

ಪುತ್ತೂರು; ರಸ್ತೆಯಲ್ಲಿ ನಿಲ್ಲಿಸಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಉರ್ಲಾಂಡಿ ಬಳಿ ನಡೆದಿದೆ. ಕುಂಜುರುಪಂಜ ಸಮೀಪದ ನಿವಾಸಿ ಸುದೀಪ್ ಚೊಕ್ಕಾಡಿ ಮೃತರು.

ಸುದೀಪ್ ಅವರು ಭಾನುವಾರ ರಾತ್ರಿ ತಮ್ಮ ಬೈಕ್‌ನಲ್ಲಿ ನೇರಳಕಟ್ಟೆಯಲ್ಲಿರುವ ಸಹೋದರಿಯ ಮನೆಗೆ ಹೋಗುವಾಗ, ಉರ್ಲಾಂಡಿ ಬಳಿ, ಶಾಮಿಯಾನ ಸಲಕರಣೆ ತುಂಬಿದ್ದ ಲಾರಿಯೊಂದು ರಸ್ತೆಯಲ್ಲಿ ನಿಲ್ಲಿಸಿತ್ತು. ತುಂತುರು ಮಳೆ ಸುರಿಯುತ್ತಿದ್ದ ಕಾರಣ, ಕತ್ತಲೆಯಲ್ಲಿ ರಸ್ತೆಯಲ್ಲಿದ್ದ ಲಾರಿ ಏಕಾಏಕಿ ಗೋಚರಿಸದೆ, ಸುದೀಪ್ ಅವರ ಬೈಕ್ ಲಾರಿಯ ಹಿಂಬದಿಗೆ ರಭಸವಾಗಿ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಸುದೀಪ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಕೈಗೊಂಡಿದ್ದಾರೆ.

- Advertisement -

Latest News

error: Content is protected !!