Tuesday, November 3, 2026
Homeಕರಾವಳಿಉಡುಪಿಟೆರೇಸ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಟೆರೇಸ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಮಣಿಪಾಲ: 80 ಬಡಗುಬೆಟ್ಟು ಗ್ರಾಮದ ಶಾಂತಿನಗರದಲ್ಲಿ ತೆಂಗಿನಕಾಯಿ ಕೊಯ್ಯುವ ವೇಳೆ ಟೆರೇಸ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸದಾಶಿವ (59) ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ನ.2) ಮೃತಪಟ್ಟಿದ್ದಾರೆ.

ಅ.30ರಂದು ಮಧ್ಯಾಹ್ನ ಮನೆ ಸಮೀಪದ ತೆಂಗಿನ ಮರದಿಂದ ದೋಟಿಯ ಮೂಲಕ ತೆಂಗಿನಕಾಯಿ ಕೊಯ್ಯಲು ಟೆರೇಸ್‌ಗೆ ಹತ್ತಿದ್ದ ವೇಳೆ ಕಾಲು ಜಾರಿ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!