Thursday, June 4, 2026
Homeಕರಾವಳಿಉಡುಪಿಶಂಕರನಾರಾಯಣ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಶಂಕರನಾರಾಯಣ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ಶಂಕರನಾರಾಯಣ: ಅಡಿಕೆ ಕೊಯ್ಯುತ್ತಿರುವಾಗ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರದ ಯಡಮೊಗ್ಗೆ ಗ್ರಾಮದ ಉಪ್ಪಿನಮಕ್ಕಿ ಎಂಬಲ್ಲಿ ನಡೆದಿದೆ.

ಸ್ಥಳಿಯ ನಿವಾಸಿ ರವೀಂದ್ರ ಮೃತಪಟ್ಟವರು. ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!