- Advertisement -
![]()
- Advertisement -
ಕಡಬ: ತನ್ನ ಮನೆಯ ತೋಟದ ತೆಂಗಿನಕಾಯಿಯನ್ನು ಕೀಳುತ್ತಿರುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ಮೇ 4ರ ಸಂಜೆ ನಡೆದಿದೆ.
ಮೃತಪಟ್ಟ ದುರ್ದೈವಿ ದಿ| ಐತ್ತಪ್ಪ ಪೂಜಾರಿ ಅವರ ಪುತ್ರ ಉಮೇಶ್ ಪೂಜಾರಿ (46) ಎಂದು ತಿಳಿದು ಬಂದಿದೆ.
ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
- Advertisement -


