- Advertisement -
![]()
- Advertisement -
ಕಾಸರಗೋಡು;ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಆಮ್ಲೆಟ್ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬದಿಯಡ್ಕದಲ್ಲಿ ನಡೆದಿದೆ.ಬದಿಯಡ್ಕ ಚುಳ್ಳಿಕ್ಕಾನ ನಿವಾಸಿ, ಪ್ರಸಕ್ತ ಬಾರಡ್ಕದಲ್ಲಿ ವಾಸವಿದ್ದ ವಿನ್ಸೆಂಟ್ ಕ್ರಾಸ್ತಾ(52) ಮೃತರು.
ವಿನ್ಸೆಂಟ್ ಭಾನುವಾರ ಸಂಜೆ ಮನೆ ಸಮೀಪದ ಗೂಡಂಗಡಿಯಿಂದ ಆಮ್ಲೆಟ್ ತಿನ್ನುತ್ತಿದ್ದಾಗ ಘಟನೆ ನಡೆದಿದೆ. ಆಮ್ಲೆಟ್ ಗಂಟಲಲ್ಲಿ ಸಿಲುಕಿ ಒದ್ದಾಡುತ್ತಿದ್ದ ವಿನ್ಸೆಂಟ್ ರನ್ನು ತಕ್ಷಣ ಕುಂಬಳೆಯ ಆಸ್ಪತ್ರೆಗೆ ಕರೆದೊಯ್ಯಲಾತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದರು. ಬೇಳ ಕಟ್ಟತ್ತಂಗಡಿ ಎಂಬಲ್ಲಿ ವೆಲ್ಡಿಂಗ್ ಶಾಫ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಿನ್ಸೆಂಟ್ ಕ್ರಾಸ್ತಾ ಅವಿವಾಹಿತರಾಗಿದ್ದರು.. ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿ ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -


