Thursday, June 4, 2026
Homeಕರಾವಳಿಉಡುಪಿಮಲ್ಪೆ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಮಲ್ಪೆ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಮಲ್ಪೆ: ರವಿ ಎಂಬುವವರು ತೆಂಗಿನ ಕಾಯಿ ಕೊಯ್ದು ಮರದಿಂದ ಇಳಿಯುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಈಶ್ವರ ನಗರ ಎಂಬಲ್ಲಿ ನಡೆದಿದೆ.

ರವಿ ( 46 ) ಮೃತಪಟ್ಟವರು. ಅವರು ತೆಂಗಿನ ಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದರು. ಈಶ್ವರ ನಗರದ ನಿವಾಸಿ ಜೈಕರ್ ಅವರ ಮನೆಯಲ್ಲಿ ತೆಂಗಿನ ಕಾಯಿ ಕೊಯ್ದು ಮರದಿಂದ ಇಳಿಯುವಾಗ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯವಾಗಿತ್ತು.

ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಆಸ್ಪತ್ರೆಯಲ್ಲಿ ರವಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!