Sunday, May 5, 2024
Homeಕರಾವಳಿಉಡುಪಿಕಾಪು: ರಸ್ತೆ ಬದಿ ನಿಂತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ: ತಂದೆ ಮೃತ್ಯು, ಮಗನ ಸ್ಥಿತಿ...

ಕಾಪು: ರಸ್ತೆ ಬದಿ ನಿಂತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ: ತಂದೆ ಮೃತ್ಯು, ಮಗನ ಸ್ಥಿತಿ ಗಂಭೀರ

spot_img
- Advertisement -
- Advertisement -

ಕಾಪು: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಮೃತವ್ಯಕ್ತಿಯ ಮಗ ಗಂಭೀರ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಮೂಲದ ಪ್ರಭಾಕರ್ ಕೋತ ಮೃತಪಟ್ಟವರು. ಇವರ ಮಗ ಸಮರ್ಥ್ (14) ಗಂಭೀರವಾಗಿ ಗಾಯಗೊಂಡಿದ್ದಾನೆ. ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಮಗನನ್ನು ದಾಖಲಾತಿ ಮಾಡಲು ಇಬ್ಬರು ಆಗಮಿಸಿದ್ದರು. ಇಬ್ಬರು ಉಚ್ಚಿಲದಲ್ಲಿ ಬಸ್‌ನಿಂದ ಇಳಿದು ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!