Thursday, June 4, 2026
Homeಕರಾವಳಿಪುತ್ತೂರು; ನೇತ್ರಾವತಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಪುತ್ತೂರು; ನೇತ್ರಾವತಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

- Advertisement -
- Advertisement -

ಪುತ್ತೂರು; ನೇತ್ರಾವತಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ಮಾ.24ರಂದು ನಡೆದಿದೆ.

ಸವಣೂರು ಸಮೀಪದ ಅಂಕತ್ತಡ್ಕದ ಮಂಜುನಾಥ್ (35) ಮೃತ ವ್ಯಕ್ತಿ.

ಬಿಳಿಯೂರು ಅಣೆಕಟ್ಟಿನಿಂದಾಗಿ ಹಳೆಗೇಟು ಬಳಿ ನೇತ್ರಾವತಿ ನದಿಯಲ್ಲಿ ಹಿನ್ನೀರು ತುಂಬಿಕೊಂಡಿದ್ದು, ನದಿಯ ಆಳ ತಿಳಿಯದೇ ಮಂಜುನಾಥ್ ನೀರಿಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಆಗ ಅವರೊಂದಿಗಿದ್ದವರು ಬೊಬ್ಬೆ ಹಾಕಿದ್ದು, ಅಕ್ಕಪಕ್ಕದಲ್ಲಿದ್ದವರೆಲ್ಲಾ ಓಡಿ ಬಂದು ಹಗ್ಗದ ಸಹಾಯದಿಂದ ನದಿ ನೀರಿಗಿಳಿದು ಇವರನ್ನು ಮೇಲೆತ್ತಿದ್ದರು.

ನಂತರ  ಪ್ರಥಮ ಚಿಕಿತ್ಸೆಯ ಬಳಿಕ ಆಂಬುಲೆನ್ಸ್ ಮೂಲಕ ಇವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!