Saturday, June 6, 2026
Homeಕರಾವಳಿಮಂಗಳೂರು ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮಂಗಳೂರು ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

- Advertisement -
- Advertisement -

ಮಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರ ವಲಯದ ವಾಮಂಜೂರಿನಲ್ಲಿ ನಡೆದಿದೆ.
ವಾಮಂಜೂರು ಸಮೀಪದ ಶಾಲೆಪದವು ನಿವಾಸಿ ಹರಿಶ್ಚಂದ್ರ ಪೂಜಾರಿ (50) ಮೃತಪಟ್ಟ ಕಾರ್ಮಿಕ. ಇವರು ನಿರ್ಮಾಣ ಹಂತದ ಕಟ್ಟಡದ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದಿದ್ದಾರೆ.ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಹರಿಶ್ಚಂದ್ರ ಪೂಜಾರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುರಕ್ಷತೆ ಕ್ರಮ ಅನುಸರಿಸದೆ ಕೆಲಸ ಮಾಡಿಸಿದ ಗುತ್ತಿಗೆದಾರರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!