- Advertisement -
- Advertisement -
ಮಂಗಳೂರು: ಶೇಂದಿ ತೆಗೆಯುತ್ತಿದ್ದಾಗ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮೂರ್ತೆದಾರ ಸಾವನ್ನಪ್ಪಿರುವ ಘಟನೆ ಉಳ್ಳಾಲದ ಕಣೀರುತೋಟದಲ್ಲಿ ನಡೆದಿದೆ. ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತ ವ್ಯಕ್ತಿ.
ಯಶೋಧರ್ ಅವರು ಶುಕ್ರವಾರ ಬೆಳಿಗ್ಗೆ ತನ್ನ ಮನೆ ತೋಟವೊಂದರ ಬಳಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ಯಶೋಧರ್ ಅವರು ಈ ಹಿಂದೊಮ್ಮೆ ಲೋ ಬಿಪಿ ಕಾರಣಕ್ಕೆ ಪ್ರಜ್ಞೆ ತಪ್ಪಿಬಿದ್ದಿದ್ದರು. ಲೋ ಬಿಪಿಯಿಂದಲೇ ತೆಂಗಿನ ಮರದಿಂದ ಬಿದ್ದಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದವರು. ಪ್ರಸ್ತುತ ಉಳ್ಳಾಲದ ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ಎಂಬಲ್ಲಿ ವಾಸವಿದ್ದರು.
- Advertisement -