Sunday, June 7, 2026
Homeಕರಾವಳಿಬೆಳ್ತಂಗಡಿ : ನಿಡ್ಲೆಯಲ್ಲಿ ಮರ ಕಡಿಯುವಾಗ ವ್ಯಕ್ತಿಯ ಮೇಲೆ ಬಿದ್ದು ಸಾವು

ಬೆಳ್ತಂಗಡಿ : ನಿಡ್ಲೆಯಲ್ಲಿ ಮರ ಕಡಿಯುವಾಗ ವ್ಯಕ್ತಿಯ ಮೇಲೆ ಬಿದ್ದು ಸಾವು

- Advertisement -
- Advertisement -

ಬೆಳ್ತಂಗಡಿ : ಮನೆಯ ಪಕ್ಕದಲ್ಲಿದ್ದ ಮರ ಕಡಿಯುವ ಸಂಧರ್ಭದಲ್ಲಿ ಆಕಸ್ಮಿಕವಾಗಿ ಮರ ವ್ಯಕ್ತಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿಡ್ಲೆಯಲ್ಲಿ ಸ.23 ರಂದು ಬೆಳಗ್ಗೆ 10-30ಕ್ಕೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಂಜಲ್ಪಳಿಕೆ ನಿವಾಸಿ ರಾಮಣ್ಣ ಗೌಡ(58) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ.ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ಪ್ರಯೋಜವಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!