Thursday, June 4, 2026
Homeಕರಾವಳಿವಿಟ್ಲ; ಕಾಲು ಸಂಕ ದಾಟುವಾಗ ಚರಂಡಿಗೆ ಬಿದ್ದು ವ್ಯಕ್ತಿ ಸಾವು

ವಿಟ್ಲ; ಕಾಲು ಸಂಕ ದಾಟುವಾಗ ಚರಂಡಿಗೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ವಿಟ್ಲ: ಕಾಲು ಸಂಕ ದಾಟುವಾಗ ಚರಂಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.‌ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿ ಕೇಶವ ನಾಯ್ಕ ಎಂ ಮೃತ ವ್ಯಕ್ತಿ.

ಕೇಶವ ನಾಯ್ಕ ಅವರು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮನೆಯ ಬಳಿಯಿರುವ ನೀರು ಹರಿಯುವ ಚರಂಡಿಗೆ ಹಾಕಿರುವ ಕಾಲುಸಂಕವನ್ನು ದಾಟುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೇಲೆ ಏಳಲು ಆಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!