Thursday, June 4, 2026
Homeಕರಾವಳಿಬೆಳ್ತಂಗಡಿಯ ಮಿತ್ತಬಾಗಿಲಿನಲ್ಲಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿಯ ಮಿತ್ತಬಾಗಿಲಿನಲ್ಲಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ ತೆಂಗಿನ ಕಾಯಿ ಕೀಳಲು ತೆಂಗಿನ ಮರಕ್ಕೆ ಹತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಎಂಬಲ್ಲಿ ನಡೆದಿದೆ. ಜಿನ್ನಪ್ಪ ಗೌಡ (59) ಮೃತ ದುರ್ದೈವಿ.

ಜಿನ್ನಪ್ಪ ಗೌಡ ಅವರು ತಮ್ಮ ತೋಟದಲ್ಲಿ ತೆಂಗಿನ ಮರದಿಂದ ತೆಂಗಿನ ಕಾಯಿ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ.ಕೆಳಗೆ ಬಿದ್ದು ಗಾಯಗೊಂಡ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ ವೈದ್ಯರು ಪರೀಕ್ಷಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!