Monday, July 20, 2026
Homeಕರಾವಳಿಮಂಗಳೂರುರಾಮಕುಂಜ: ತೋಟದಲ್ಲಿ ಕೆರೆಗೆ ಬಿದ್ದು ವ್ಯಕ್ತಿ ದಾರುಣ ಸಾವು

ರಾಮಕುಂಜ: ತೋಟದಲ್ಲಿ ಕೆರೆಗೆ ಬಿದ್ದು ವ್ಯಕ್ತಿ ದಾರುಣ ಸಾವು

- Advertisement -
- Advertisement -

ರಾಮಕುಂಜ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಲ್ಲಪು ಎಂಬಲ್ಲಿ ನಡೆದಿದೆ. ರಾಮಕುಂಜ ಗ್ರಾಮದ ನಿವಾಸಿ (40) ಮೃತಪಟ್ಟ ವ್ಯಕ್ತಿ.

ಶನಿವಾರ ಕೃಷಿ ತೋಟದ ಕೆಲಸಕ್ಕೆ ತೆರಳಿದ್ದ ಇವರು ಸಂಜೆಯಾದರೂ ಮನೆಗೆ ಮರಳದಿದ್ದಾಗ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದರು. ಈ ವೇಳೆ ತೋಟದ ಸಮೀಪದ ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿರುವುದೇ ಸಾವಿಗೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಡಬ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಕುಟುಂಬದ ಏಕೈಕ ಆಧಾರವಾಗಿದ್ದ ವ್ಯಕ್ತಿಯ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

- Advertisement -

Latest News

error: Content is protected !!