Friday, June 5, 2026
Homeಕರಾವಳಿಸುಳ್ಯ; ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಸುಳ್ಯ; ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಸುಳ್ಯ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯದ ಮೇನಾಲದಲ್ಲಿ ನಡೆದಿದೆ. ಸುಳ್ಯ ಮೇನಾಲ ನಿವಾಸಿ ಅಬ್ದುಲ್ (51) ಮೃತ ದುರ್ದೈವಿ.

ನಿನ್ನೆ ಸಂಜೆ ಅಬ್ದುಲ್ ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಅಬ್ದುಲ್ ಅವರು ತುಂಬಾ ಹೊತ್ತಾದರೂ ಮನೆಗೆ ಬಾರದೇ ಇದ್ದದ್ದನ್ನು ಕಂಡು ಮನೆಯವರು ಹುಡುಕಲು ಆರಂಭಿಸಿದ್ದಾರೆ. ಈ ವೇಳೆ ಕೆರೆಯಲ್ಲಿ ಅವರ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳಕ್ಕೆ ಬಂದ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!