Thursday, June 4, 2026
Homeಕರಾವಳಿಸುಬ್ರಮಣ್ಯದಲ್ಲಿ ಮಾಜಿ ಗ್ರಾ.ಪಂ ಸದಸ್ಯ ಹೊಳೆಗೆ ಬಿದ್ದು ಸಾವು

ಸುಬ್ರಮಣ್ಯದಲ್ಲಿ ಮಾಜಿ ಗ್ರಾ.ಪಂ ಸದಸ್ಯ ಹೊಳೆಗೆ ಬಿದ್ದು ಸಾವು

- Advertisement -
- Advertisement -

ಸುಬ್ರಹ್ಮಣ್ಯ: ಗ್ರಾಮಪಂಚಾಯತ್ ನ ಮಾಜಿ ಸದಸ್ಯರೊಬ್ಬರು ಹೊಳೆಗೆ ಬಿದ್ದು ಸಾವನಪ್ಪಿರುವ ಘಟನೆ ಸುಬ್ರಮಣ್ಯದಲ್ಲಿ ನಡೆದಿದೆ. ಮೃತಪಟ್ಟವರನ್ನು ಸುಬ್ರಹ್ಮಣ್ಯ ಗ್ರಾ.ಪಂ ನ ಮಾಜಿ ಸದಸ್ಯ ಏನೆಕಲ್ಲು ಗ್ರಾಮದ ಕುಶಾಲಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಇನ್ನು ಇವರು ಪತ್ನಿ ಹಾಲಿ ಸದಸ್ಯೆಯಾಗಿದ್ದಾರೆ.


ನಿನ್ನೆ ಬೆಳಗ್ಗೆ ಮನೆಯಿಂದ ಹೊರ ಹೋದವರು ಹೊಳೆಗೆ ಬಿದ್ದು ಮೃತಪಟ್ಟಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಹೃದಯಾಘಾತದಿಂದ ಮೃತಪಟ್ಟಿರಬೇಕು ಎನ್ನಲಾಗಿದೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಹಾಲಿ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಶಶಿಕಲಾ ಜಿಕ್ಕನಮಜಲು, ಮಕ್ಕಳಾದ ಕೌಶಿಕ್, ಸುಮಂತ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!