Thursday, June 4, 2026
Homeಕರಾವಳಿಮಂಗಳೂರು; ಜಿಲ್ಲೆಯಲ್ಲಿ ಮಳೆಗೆ ಮೊದಲ ಬಲಿ; ಆಯತಪ್ಪಿ ಮೋರಿಗೆ ಬಿದ್ದು ವ್ಯಕ್ತಿ ಸಾವು

ಮಂಗಳೂರು; ಜಿಲ್ಲೆಯಲ್ಲಿ ಮಳೆಗೆ ಮೊದಲ ಬಲಿ; ಆಯತಪ್ಪಿ ಮೋರಿಗೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಗೆ ಮೊದಲ ಬಲಿಯಾಗಿದೆ. ಮೋರಿ ದಾಟುವಾಗ ಆಯತಪ್ಪಿ ಮೋರಿಗೆ ಬಿದ್ದು ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ.

ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52)ಮೃತ ದುರ್ದೈವಿ.

ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ ಮುಗಿಸಿ ಮನೆಗೆ ಬರುವಾಗ ಮೋರಿ ದಾಟುತ್ತಿದ್ದ ವೇಳೆ ಕಾಲು ಜಾರಿ ಮೋರಿಗೆ ಬಿದ್ದು ಧಾರಾಕಾರ ಸುರಿಯುತ್ತಿದ್ದ ಮಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಮೋರಿಯಲ್ಲಿ ಬಿದ್ದಿದ್ದ ಸುರೇಶ್ ಅವರನ್ನು ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆ ಸಾಗಿಸುವಾಗಲೇ ಮೃತ ಪಟ್ಟಿದ್ದಾರೆ.

- Advertisement -

Latest News

error: Content is protected !!