Saturday, June 6, 2026
Homeಕರಾವಳಿಬೆಳ್ತಂಗಡಿ : ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ : ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ : ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಕಲ್ಮಂಜದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ(35) ಎಂಬುವವರು ಮಂಗಳವಾರ ರಾತ್ರಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ.

ನವವಿಹಿತರಾದ ಕೃಷ್ಣಪ್ಪ ಪೂಜಾರಿಯವರು ಮೇಸ್ತ್ರಿ ಕೆಲಸ ಮಾಡುತ್ತಿದ್ದರು, ಮಂಗಳವಾರ ರಾತ್ರಿ ಸುಮಾರು ಎಂಟು ಗಂಟೆಯ ಸಮಯಕ್ಕೆ ಕಾಣೆಯಾಗಿದ್ದರು ಇವರು ನಾಪತ್ತೆಯಾಗಿದ್ದ ಬಗ್ಗೆ ಮನೆ ಮಂದಿ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ ಆದ್ರೆ ಪತ್ತೆಯಾಗಿರಲಿಲ್ಲ. ಬುಧವಾರ ಸಂಜೆ ಮೃತ ದೇಹವು ಬಾವಿಯಲ್ಲಿ ತೇಲಾಡುತ್ತಿರುವುದು  ಮನೆಯವರಿಗೆ ಕಂಡಿದೆ, ತಕ್ಷಣ ಬಾವಿಯಿಂದ ಮೃತದೇಹ ತೆಗೆದು ಶವಪರೀಕ್ಷೆಗೆ ಬೆಳ್ತಂಗಡಿ ಶವಗಾರಕ್ಕೆ ಸಾಗಿಸಿದ್ದಾರೆ.

ಸಾವನ್ನಪ್ಪಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!