- Advertisement -
- Advertisement -
ಉಡುಪಿ: ರಸ್ತೆ ದಾಟುವಾಗ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಟಪಾಡಿಯಲ್ಲಿ ನಡೆದಿದೆ.ಮೂಡುಬೆಳ್ಳೆ ನಿವಾಸಿ ಜಾನ್ಸನ್ ರೋಡ್ರಿಗಸ್ ಮೃತ ದುರ್ದೈವಿ.
ಜಾನ್ಸನ್ ರೋಡ್ರಿಗಸ್ ವಿಪರೀತ ಕುಡಿತದ ಚಟ ಹೊಂದಿದ್ದರು. ಅ. 1ರಂದು ಕುಡಿತದ ಅಮಲಿನಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಆಯತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು.ಸ್ಥಳೀಯರು ಉಪಚರಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಜಾನ್ಸನ್ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -