Thursday, June 4, 2026
Homeಕರಾವಳಿಕಡಬ; ಹೊಸ ಮನೆಯ ಮೇಲ್ಛಾವಣಿ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು

ಕಡಬ; ಹೊಸ ಮನೆಯ ಮೇಲ್ಛಾವಣಿ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು

- Advertisement -
- Advertisement -

ಕಡಬ; ಹೊಸ ಮನೆಯ ಮೇಲ್ಛಾವಣಿ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಬಾರ್ಕುಲಿ ಎಂಬಲ್ಲಿ ನಡೆದಿದೆ. ಉದಯ ಕುಮಾರ್‌ (27) ಮೃತ ಯುವಕ.

ಉದಯ್ ಅವರು ನವೆಂಬರ್ 12ರಂದು ತನ್ನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಅವರನ್ನು ತತ್‌ಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್‌ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫ‌ಲಿಸದೇ ಸಾವನ್ನಪ್ಪಿದ್ದಾರೆ.
ಉದಯ ಕುಮಾರ್‌ ಅವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದುಕೊಂಡು ಸಮಾಜಸೇವಕರಾಗಿದ್ದರು.

- Advertisement -

Latest News

error: Content is protected !!