Saturday, June 6, 2026
Homeಕರಾವಳಿಪುತ್ತೂರು; ಕೆಎಸ್ ಆರ್ ಟಿಸಿ ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು

ಪುತ್ತೂರು; ಕೆಎಸ್ ಆರ್ ಟಿಸಿ ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು

- Advertisement -
- Advertisement -

ಪುತ್ತೂರು; ಕೆಎಸ್ ಆರ್ ಟಿಸಿ ಬಸ್ ನಿಂದ ಬಿದ್ದು ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಕೆಮ್ಮಾಯಿಯಲ್ಲಿ ನಡೆದಿದೆ. ಕೆದಿಲ ಗ್ರಾಮದ ಮುದ್ರಾಜೆ ನಿವಾಸಿ ಕೆಮ್ಮಾಯಿಯಲ್ಲಿ ವಾಸವಿರುವ ಸೋಮಪ್ಪ ನಾಯ್ಕ ಮೃತ ದುರ್ದೈವಿ.

ಸೋಮಪ್ಪ ನಾಯ್ಕ ಅವರು ಪುತ್ತೂರಿನಿಂದ ಉಪ್ಪಿನಂಗಡಿಯ ಹಳೇನೇರಂಕಿ ಕಡೆ ಹೋಗುತ್ತಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕೆಮ್ಮಾಯಿ ಬಸ್ ನಿಲ್ದಾಣದ ಬಳಿ ಬಸ್ ನಿಂದ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!