- Advertisement -
- Advertisement -
ಕಡಬ; ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನೆಟ್ಟಣದಲ್ಲಿ ನಡೆದಿದೆ. ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಮೃತ ದುರ್ದೈವಿ.
ಹರಿಪ್ರಸಾದ್ ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.ತಕ್ಷಣವೇ ಸ್ಥಳೀಯ ಯುವಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
- Advertisement -