Friday, June 5, 2026
Homeಕರಾವಳಿಮಂಗಳೂರು: ಮಹಡಿಯಿಂದ ಬಿದ್ದು ಯುವಕ ಸಾವು

ಮಂಗಳೂರು: ಮಹಡಿಯಿಂದ ಬಿದ್ದು ಯುವಕ ಸಾವು

- Advertisement -
- Advertisement -

ಮಂಗಳೂರು: ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ನಿನ್ನೆ ರಾತ್ರಿ(ಸೋಮವಾರ) ನಡೆದಿದೆ.  ಕುದ್ರೋಳಿ ಸಮೀಪದ ಕಂಡತ್‌ಪಳ್ಳಿ ಬಳಿಯಲ್ಲಿ ತರಕಾರಿ ಅಂಗಡಿ ಹೊಂದಿರುವ ಟಿಕೆಎಚ್ ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ (34) ಮೃತಪಟ್ಟ ಯುವಕ.

ರಿಯಾಝ್ ಸಮೀಪದ ಮನೆಯೊಂದರ ಮಹಡಿ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ತಕ್ಷಣ ಮುಹಮ್ಮದ್ ರಿಯಾಝ್‌ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!