Wednesday, June 3, 2026
Homeಕರಾವಳಿಕಡಬ:ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಕಡಬ:ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಕಡಬ:ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಚ್ಲಂಪಾಡಿಯಲ್ಲಿ ನಡೆದಿದೆ.ಇಚ್ಲಂಪಾಡಿ ಗ್ರಾಮದ ಮೊಂಟೆತ್ತಡ್ಕ ನಿವಾಸಿ ಸೋಮನಾಥ(47) ಮೃತ ದುರ್ದೈವಿ.

ಆ.7ರಂದು ಇಚ್ಲಂಪಾಡಿ ಗ್ರಾಮದ ಮಾನಡ್ಕ ಎಂಬಲ್ಲಿಗೆ ಕೂಲಿ ಕೆಲಸಕ್ಕೆ ಹೋಗಿದ್ದು, ಮರ ಏರಿ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಇವರನ್ನು ಚಿಕಿತ್ಸೆಗಾಗಿ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಮೃತರ ಪುತ್ರ ಜಯಂತ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!