Thursday, June 4, 2026
Homeಕರಾವಳಿಬೆಳ್ತಂಗಡಿ; ಪತ್ನಿಯನ್ನು ಬಸ್  ಹತ್ತಿಸಿ ಬೈಕ್ ನಲ್ಲಿ ಬರುತ್ತೇನೆಂದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವು

ಬೆಳ್ತಂಗಡಿ; ಪತ್ನಿಯನ್ನು ಬಸ್  ಹತ್ತಿಸಿ ಬೈಕ್ ನಲ್ಲಿ ಬರುತ್ತೇನೆಂದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವು

- Advertisement -
- Advertisement -

ಬೆಳ್ತಂಗಡಿ; ಪತ್ನಿಯನ್ನು ಹತ್ತಿಸಿ ಬೈಕ್ ನಲ್ಲಿ ಬರುತ್ತೇನೆಂದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ.

ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (40) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ಕೆಲಸ  ಮಾಡುತ್ತಿದ್ದ ದಿಲೀಪ್ ಉಜಿರೆಯಲ್ಲಿ ವಾಸವಿದ್ದರು. ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್‌ನಲ್ಲಿ ಉಜಿರೆಗೆ ಹೊರಟಿದ್ದಾರೆ. ಈ ವೇಳೆ ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗು ಎಂದು ಹೇಳಿ ತಾನು ಮಳೆ ನಿಂತ ಮೇಲೆ ಬೈಕ್‌ನಲ್ಲಿ ಬರುವುದಾಗಿ ತಿಳಿಸಿದ್ದಾರೆ.

ಆದರೆ ಬುಧವಾರ ಸಂಜೆ ಹೆಬ್ಬರಿಗೆ ಸಮೀಪ ರಸ್ತೆ ಬದಿಯಲ್ಲಿ ದಿಲೀಪ್ ಅವರ ಮೃತದೇಹ ಪತ್ತೆಯಾಗಿದೆ.  ಮೃತದೇಹದ ಜೊತೆಗಿದ್ದ ಮೊಬೈಲ್‌ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಪಿಎಸ್‌ಐ ಜಂಬೂರಾಜ್ ಮಹಾಜನ್, ಎಎಸ್‌ಐ ಶಶಿ, ಸಿಬ್ಬಂದಿಗಳಾದ ಜಗದೀಶ್ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

ಇನ್ನು ದಿಲೀಪ್ ಅವರ ಸ್ಕೂಟಿ ಚಾರ್ಮಾಡಿ ಘಾಟ್ ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿದ್ದ ಮನೆಯ ಗೃಹಪ್ರವೇಶ ಮೇ 5 ರಂದು ಹಮ್ಮಿಕೊಂಡಿದ್ದು ಗೃಹಪ್ರವೇಶಕ್ಕೆ ಆಹ್ವಾನಿಸಲೆಂದು ಚಿಕ್ಕಮಗಳೂರಿಗೆ ಬಂದಿದ್ದವರು ಹಿಂದಿರುಗುವ ವೇಳೆ ಈ ಘಟನೆ ನಡೆದಿದ್ದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

- Advertisement -

Latest News

error: Content is protected !!