Saturday, June 28, 2025
Homeತಾಜಾ ಸುದ್ದಿಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಪತ್ನಿಯನ್ನು ತಳ್ಳಿ ಕೊಂದ ಪತಿ

ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಪತ್ನಿಯನ್ನು ತಳ್ಳಿ ಕೊಂದ ಪತಿ

spot_img
- Advertisement -
- Advertisement -

ಮುಂಬೈ: ರೈಲಿನ ಬಾಗಿಲಿನಲ್ಲಿ ನಿಂತ ಪತ್ನಿಯನ್ನು ಪತಿಯೇ ತಳ್ಳಿ ಕೊಂದಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.

ಛೇಂಬರ್ ಮತ್ತು ಗೋವಾಂದಿ ರೈಲ್ವೆ ನಿಲ್ದಾಣಗಳ ಮಾರ್ಗಮಧ್ಯದಲ್ಲಿ ಈ ಘಟನೆ ನಡೆದಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿಯನ್ನು ಬಂಧಿಸಲಾಗಿದೆ.

31 ವರ್ಷದ ಆರೋಪಿ ಮತ್ತು ಮೃತ ಮಹಿಳೆಯಿಬ್ಬರೂ ಕೂಲಿ ಕೆಲಸ ಮಾಡಿಕೊಂಡಿದ್ದು, ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇದಕ್ಕೂ ಮೊದಲೇ ಮದುವೆಯಾಗಿದ್ದ ಮಹಿಳೆಗೆ 7 ವರ್ಷ ಮಗುವನ್ನು ಹೊಂದಿದ್ದಳು. ಕಳೆದ ಸೋಮವಾರ ಮಹಿಳೆಯು ತನ್ನ ಮಗು ಹಾಗೂ ಆರೋಪಿತ ಪತಿಯ ಜೊತೆ ಸ್ಥಳೀಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿರುವ ಬಗ್ಗೆ ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ರೈಲಿನ ಬಾಗಿಲಿನಲ್ಲಿ ನಿಂತಿದ್ದ ದಂಪತಿಯು ಬಾಗಿಲಿನ ಪಕ್ಕದಲ್ಲಿರುವ ಕಂಬಿ ಹಿಡಿದು ನೇತಾಡುತ್ತಿದ್ದರು. ಈ ವೇಳೆ ಪತಿಯು ಪತ್ನಿಯನ್ನು ರೈಲಿನಿಂದ ತಳ್ಳಿದ್ದಾನೆ. ಈ ದೃಶ್ಯವನ್ನು ನೋಡಿದ ಮಹಿಳಾ ಪ್ರಯಾಣಿಕರು ಗೊವಾಂಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲ್ಲುತ್ತಿದ್ದಂತೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆರೋಪಿತ ಪತಿಯನ್ನು ಪೊಲೀಸರು ಘಟನಾ ಸ್ಥಳಕ್ಕೆ ಕರೆದೊಯ್ದಿದ್ದು, ಈ ವೇಳೆ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಷ್ಟರಲ್ಲೇ ಮಹಿಳೆಯು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆರೋಪಿ ಪತಿಯನ್ನು ಬಂದಿಸಿದ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!