Friday, June 5, 2026
Homeಕರಾವಳಿಬೆಳ್ತಂಗಡಿಯ ಪುತ್ರಬೈಲಿನಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಮೋದ್ ಬೈರ ಸಾವು

ಬೆಳ್ತಂಗಡಿಯ ಪುತ್ರಬೈಲಿನಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಮೋದ್ ಬೈರ ಸಾವು

- Advertisement -
- Advertisement -

ಬೆಳ್ತಂಗಡಿ : ಇಲ್ಲಿನ ಲಾಯಿಲ ಗ್ರಾಮದ ಪುತ್ರಬೈಲು ಸಮೀಪ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಏಪ್ರಿಲ್ 9ರಂದು ನಡೆದಿತ್ತು.  ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಮೋದ್ ಬೈರ(35)ಸಾವನ್ನಪ್ಪಿದ್ದಾರೆ.

ಇನ್ನು ಅಪಘಾತದ ವೇಲೆ ಡಿಕ್ಕಿ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಚಾಲಕ ಲಾಯಿಲದ ಪುತ್ರಬೈಲು ನಿವಾಸಿ  ಪ್ರಸ್ತುತ ಎಪಿಎಂಸಿ ಸದಸ್ಯ ಈಶ್ವರ ಬೈರ, ಮಾಜಿ‌ ತಾಲೂಕು ಪಂಚಾಯತ್ ಸದಸ್ಯ ಈಶ್ವರ ಬೈರ ಅವರ ಹಿರಿಯ ಪುತ್ರ ಪ್ರಮೋದ್ ಬೈರ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!