Wednesday, June 24, 2026
Homeಕರಾವಳಿಮಂಗಳೂರುಪುತ್ತೂರು:ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ

ಪುತ್ತೂರು:ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ

- Advertisement -
- Advertisement -

ಪುತ್ತೂರು:ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪ್ಯದಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ ನಡೆದಿದೆ.

ಸಂಪ್ಯ ನಿವಾಸಿ ಅಬ್ದುಲ್ ರಹಿಮಾನ್ (58) ಗಾಯಗೊಂಡವರು. ಗಾಯಾಳುವಿಗೆ ಸಂಪ್ಯದ ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಬ್ದುಲ್ ರಹಿಮಾನ್ ಅವರು ಸಂಪ್ಯ ಮಸೀದಿಯ ಮುಂಭಾಗದಲ್ಲಿ ತನ್ನ ಸ್ಕೂಟರ್ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

- Advertisement -

Latest News

error: Content is protected !!