Monday, June 8, 2026
Homeಕರಾವಳಿಬೆಳ್ತಂಗಡಿ : ಗುರುವಾಯನಕೆರೆ ಕೆರೆಗೆ ಹಾರಿ ಆತ್ಮಹತ್ಯೆ ಪ್ರಕರಣ; ಆಟೋ ಚಾಲಕನ ಶವ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ : ಗುರುವಾಯನಕೆರೆ ಕೆರೆಗೆ ಹಾರಿ ಆತ್ಮಹತ್ಯೆ ಪ್ರಕರಣ; ಆಟೋ ಚಾಲಕನ ಶವ ಕೆರೆಯಲ್ಲಿ ಪತ್ತೆ

- Advertisement -
- Advertisement -

ಬೆಳ್ತಂಗಡಿ: ಆಟೋ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದಿದ್ದು ಕೆರೆಯಲ್ಲಿ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಇದೀಗ ಆಟೋ ಚಾಲಕನ ಶವ ಪತ್ತೆಯಾಗಿದೆ.

ಸ್ಥಳೀಯ ರಿಕ್ಷಾ ಡ್ರೈವರ್ ಪ್ರವೀಣ್ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಈಗಾಗಲೇ ಅಗ್ನಿಶಾಮಕ ದಳ, ಬೆಳಾಲು ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸುತಿತ್ತು. ಶವವನ್ನು ಬೆಳ್ತಂಗಡಿ ಸರಕಾರಿ ಶವಗಾರಕ್ಕೆ ಸಾಗಿಸಲಾಗಿದೆ.

ನಿನ್ನೆ ರಾತ್ರಿ ಗುರುವಾಯನಕೆರೆಯಲ್ಲಿ ಸ್ನೇಹಿತನ ಮೆಹಂದಿ ಕಾರ್ಯಕ್ರಮ ಇದ್ದು ಇಲ್ಲಿ ಗಲಾಟೆ ನಡೆದಿದ್ದು ನಂತರ  ಗೆಳೆಯರು ಸಮಾಧಾನ ಮಾಡಿ ಮನೆಗೆ ಕರೆದುಕೊಂಡು ಬಿಟ್ಟಿದ್ದರು ಈ ನಡುವೆ ವ್ಯಕ್ತಿಯೊಬ್ಬರಿಗೆ ಬೆಳಗ್ಗೆ ನಾಲ್ಕು ಗಂಟೆಗೆ ಕರೆ ಮಾಡಿ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಗಲಾಟೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರವೀಣ್ ಪತ್ನಿ ಏಳು ತಿಂಗಳ ಗರ್ಭಿಣಿ ಕೂಡ ಅಗಿದ್ದಾರೆ.

ಆತ್ಮಹತ್ಯೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!