Friday, June 5, 2026
Homeಕರಾವಳಿಮೂಡಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಮೂಡಬಿದಿರೆ: ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಬೆಳುವಾಯಿ ಎಂಬಲ್ಲಿ ನಡೆದಿದೆ.ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಅವರ ಪುತ್ರ ಸಂತೋಷ್ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡವರು.

ಸಂತೋಷ್ ಇಂದು ಮುಂಜಾನೆ ತಮ್ಮ ಪಕ್ಕದ ಮನೆಯಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಮನೆಗೆ ಆಧಾರ ಸ್ತಂಭವಾಗಿದ್ದ ಇವರು ಮೂಡಬಿದಿರೆಯಲ್ಲಿ 88 ಎಲೆಕ್ಟ್ರೋ ವರ್ಲ್ಡ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಇವರು ಪತ್ನಿ, ಇಬ್ಬರು  ಅವಳಿ ಪುತ್ರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಮೂಡಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!