Thursday, June 25, 2026
Homeಕರಾವಳಿಮಂಗಳೂರುಮಂಗಳೂರು: ಗುರುಪುರ ಸೇತುವೆಯಿಂದ ಹಾರಿ ವ್ಯಕ್ತಿ ನಾಪತ್ತೆ

ಮಂಗಳೂರು: ಗುರುಪುರ ಸೇತುವೆಯಿಂದ ಹಾರಿ ವ್ಯಕ್ತಿ ನಾಪತ್ತೆ

- Advertisement -
- Advertisement -

ಮಂಗಳೂರು: ಗುರುಪುರ ಸೇತುವೆಯಿಂದ ಫಲ್ಗುಣಿ ಹಾರಿ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್‌ನ ರಮೇಶ್ ಕುಲಾಲ್ (48) ನಾಪತ್ತೆಯಾದ ವ್ಯಕ್ತಿ. ಈ ಬಗ್ಗೆ ಬಜ್ಪೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ನಾಪತ್ತೆಯಾದ ವ್ಯಕ್ತಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.

ಶನಿವಾರ ರಾತ್ರಿ 8 ಗಂಟೆ ವೇಳೆಗೆ ಬಸ್ಸಿನಲ್ಲಿ ಗುರುಪುರ ಸೇತುವೆ ಬಳಿ ಆಗಮಿಸಿ ಸೇತುವೆ ಮೇಲೆ ಮೊಬೈಲ್ ಮತ್ತು ಚಪ್ಪಲಿಯನ್ನಿಟ್ಟು ನದಿಗೆ ಹಾರಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ರಮೇಶ್ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ಮಂಗಳೂರಿನ ಇನ್‌ಲ್ಯಾಂಡ್ ಕಂಪೆನಿಯಲ್ಲಿ ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ರಮೇಶ್‌ಗಾಗಿ ಫಲ್ಗುಣಿ ನದಿಯಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಬಜ್ಪೆ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

- Advertisement -

Latest News

error: Content is protected !!