Thursday, June 4, 2026
Homeಕರಾವಳಿಉಡುಪಿರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು...! ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು...!

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು…! ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…!

- Advertisement -
- Advertisement -

ಕಾಪು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮಲ್ಲಾರು ಗ್ರಾಮದ ಕುಡ್ತಿಮಾರು ಉರ್ದು ಶಾಲೆಯ ಬಳಿಯ ರೈಲ್ವೇ ಹಳಿಯಲ್ಲಿ ನಡೆದಿದೆ. ಮಲ್ಲಾರು – ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಹತ್ತಿರದ ನಿವಾಸಿ ಅಬ್ದುಲ್ ರಜಾಕ್ (48) ಮೃತ ವ್ಯಕ್ತಿ.

ಶುಕ್ರವಾರ ಬೆಳಿಗ್ಗೆ 06:30 ಗಂಟೆಯಿಂದ 08:00 ಗಂಟೆಯ ‌ನಡುವೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ಯಾವುದೋ ರೈಲು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಕಾಪು‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆಪತ್ಬಾಂಧವ ಸೂರಿ ಶೆಟ್ಟಿ ಅವರ ಸಹಕಾರದೊಂದಿಗೆ ಮೃತ ದೇಹವನ್ನು ತೆರವುಗೊಳಿಸಲಾಯಿತು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!