Friday, July 4, 2025
Homeಕರಾವಳಿಉಡುಪಿ ಉಡುಪಿ; ಸ್ನೇಹಿತನ ಕತ್ತು ಸೀಳಿ ಕೊಲೆಗೈದ ವ್ಯಕ್ತಿ

 ಉಡುಪಿ; ಸ್ನೇಹಿತನ ಕತ್ತು ಸೀಳಿ ಕೊಲೆಗೈದ ವ್ಯಕ್ತಿ

spot_img
- Advertisement -
- Advertisement -

ಉಡುಪಿ; ವ್ಯಕ್ತಿಯೊಬ್ಬ ಸ್ನೇಹಿತನ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನಲ್ಲಿ ನಡೆದಿದೆ.
ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಗೈದ ವ್ಯಕ್ತಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಮಾಡಿದ ವ್ಯಕ್ತಿ.

ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದಂತೆ ಕಂಡುಬಂದರೂ ಬೇರೆ ಏನಾದರೂ ಕಾರಣ ಇದೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

- Advertisement -
spot_img

Latest News

error: Content is protected !!