Thursday, June 4, 2026
HomeUncategorizedಉಡುಪಿ; ಅಪರಿಚಿತ ವ್ಯಕ್ತಿಯನ್ನು ಕೊಲೆಗೈದ ದುಷ್ಕರ್ಮಿಗಳು

ಉಡುಪಿ; ಅಪರಿಚಿತ ವ್ಯಕ್ತಿಯನ್ನು ಕೊಲೆಗೈದ ದುಷ್ಕರ್ಮಿಗಳು

- Advertisement -
- Advertisement -

ಉಡುಪಿ; ಅಪರಿಚಿತ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆಗೈದ ಘಟನೆ ಉಡುಪಿಯ ಕರಾವಳಿ ಬೈಪಾಸ್ ಬಳಿ ನಡೆದಿದೆ.

ಕಳೆದ ರಾತ್ರಿ ಹರಿತವಾದ ಆಯುಧದಿಂದ ಸ್ಥಳೀಯವಾಗಿ ಗುಜರಿ ಆಯುತ್ತಿದ್ದ ವ್ಯಕ್ತಿಯ ಬಲ ಕೈಯನ್ನು ದುಷ್ಕರ್ಮಿಗಳು ಕಡಿದಿದ್ದು ಇದರಿಂದ ತೀವ್ರ ರಕ್ತಸ್ರಾವ ಉಂಟಾಗಿ ಅವರು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಇಂದು ಬೆಳಗ್ಗೆ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಉಡುಪಿ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ, ಡಿವೈಎಸ್ಪಿ ದಿನಕರ್ ಹಾಗೂ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಎಂಸಿ ಮಣಿಪಾಲ ಹಾಗೂ ಮಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

- Advertisement -

Latest News

error: Content is protected !!