Friday, June 5, 2026
Homeಕರಾವಳಿಮಂಗಳೂರುಬಂಟ್ವಾಳ: ಪತಿಯೊಂದಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಂದಿಗೆ ಅಸಭ್ಯ ವರ್ತನೆ ; ಆರೋಪಿಯ ಬಂಧನ

ಬಂಟ್ವಾಳ: ಪತಿಯೊಂದಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಂದಿಗೆ ಅಸಭ್ಯ ವರ್ತನೆ ; ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: ಪತಿಯೊಂದಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಅಬೂಬಕ್ಕರ್ ಬಂಧಿತ ಆರೋಪಿ.

ಸಂತ್ರಸ್ತ ಮಹಿಳೆ ತನ್ನ ಗಂಡನ ಎಂಬವರ ಜೊತೆ ಉಜಿರೆಯಿಂದ ಮಂಗಳೂರು ಪ್ರಯಾಣಿಸುತ್ತಿದ್ದ ವೇಳೆ ಬಂಟ್ವಾಳ ಬಿ.ಕಸ್ಬಾ ಗ್ರಾಮದ ತುಂಬ್ಯೆ ಜಂಕ್ಷನ್ ಎಂಬಲ್ಲಿ ಬಸ್ಸಿನಲ್ಲಿ ನಿಂತುಕೊಂಡಿದ್ದ ಆರೋಪಿ ಅಬೂಬಕ್ಕರ್ ದೈಹಿಕ ಕಿರುಕುಳ ನೀಡಿದ್ದಾನೆ ಎಂದು ಬಂಟ್ವಾಳ ‌ನಗರ ಪೋಲೀಸ್ ಠಾಣೆಗೆ ದೂರು‌ ನೀಡಿದ್ದಾರೆ.

ದೂರಿನ ಕುರಿತು ಪರಿಶೀಲಿಸಿ ಬಂಟ್ವಾಳ ನಗರ ಪೋಲೀಸರು ‌ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!