- Advertisement -
- Advertisement -
ವಿಟ್ಲ: ನನ್ನ ಪತಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ವಿಟ್ಲ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಇಡ್ಕಿದು ಮೈಕೆ ನಿವಾಸಿ ನವೀನ್ (37) ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ರೇಖಾ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನನ್ನ ಪತಿ ನವೀನ್ ಅವರು ಮೇ.3 ರಂದು ಪುತ್ತೂರಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ವಾಪಾಸ್ ಬಂದಿಲ್ಲ. ಸಂಬಂಧಿಕರ ಮನೆ, ಸ್ನೇಹಿತರನ್ನು ವಿಚಾರಿಸಿದಾಗಲೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
- Advertisement -