Saturday, June 6, 2026
Homeಕರಾವಳಿಮಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯನ್ನು ಇರಿದು ಕೊಲೆ

ಮಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯನ್ನು ಇರಿದು ಕೊಲೆ

- Advertisement -
- Advertisement -

ಮಂಗಳೂರು; ಹಾಡಹಗಲೇ ವ್ಯಕ್ತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ. ಜ್ಯುವೆಲ್ಲರಿ ಅಂಗಡಿಯೊಂದರ ಸಿಬ್ಬಂದಿ, ಅತ್ತಾವರದ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ.


ಮಧ್ಯಾಹ್ನ ಮುಸುಕು ಹಾಕಿಕೊಂಡು ಅಂಗಡಿಗೆ  ಬಂದ ವ್ಯಕ್ತಿಯೊಬ್ಬ ರಾಘವೇಂದ್ರ ಅವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಅಂಗಡಿ ಮಾಲೀಕ ಊಟಕ್ಕೆ ಹೋದಾಗ ಕೃತ್ಯ ನಡೆದಿದೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರ ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಷ್ಟರಲ್ಲಿ ಮಾರ್ಗ ಮದ್ಯೆ ರಾಘವೇಂದ್ರ ಸಾವನ್ನಪ್ಪಿದ್ದಾರೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

- Advertisement -

Latest News

error: Content is protected !!