Thursday, June 25, 2026
Homeಅಪರಾಧಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಬರ್ಬರ ಹತ್ಯೆಗೈದ ಪಾಪಿ

ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಬರ್ಬರ ಹತ್ಯೆಗೈದ ಪಾಪಿ

- Advertisement -
- Advertisement -

ಬೆಂಗಳೂರು: ಕೇವಲ 50 ರೂಪಾಯಿಗಾಗಿ ಸ್ನೇಹಿತರ ನಡುವೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಕುರುಬರಹಳ್ಳಿ ವೃತ್ತದ ಬಳಿ ಮಂಗಳವಾರ ರಾತ್ರಿ ನಡೆದಿದೆ.


ಶಿವಮಾಧು (24) ಕೊಲೆಯಾದ ಯುವಕ. ಈತನ ಸ್ನೇಹಿತ ಶಾಂತಕುಮಾರ್ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.


ಆರೋಪಿ ಜೊಮ್ಯಾಟೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಮೃತ ಶಿವಮಾಧು ಆಟೋ ಚಾಲಕನಾಗಿದ್ದ. ಮಗಳವಾರ ರಾತ್ರಿ ಶಾಂತಕುಮಾರ್ ಜೇಬಿನಿಂದ ಶಿವಮಾಧು 50 ರೂಪಾಯಿ ತೆಗೆದುಕೊಂಡಿದ್ದಾನೆ. ಈ ವಿಷಯಕ್ಕೆ ಇಬ್ಬರ ಮಧ್ಯೆ ಜಗಳವಾಗಿದೆ.ಆಗ ಶಾಂತಕುಮಾರ್ ತನ್ನ ಬಳಿ ಇದ್ದ ಚಾಕುವಿನಿಂದ ಶಿವಮಾಧು ಎದೆಗೆ ಚುಚ್ಚಿ ಪರಾರಿಯಾಗಿದ್ದಾನೆ.


ಗಾಯಗೊಂಡು ಬಿದ್ದಿದ್ದಶಿವಮಾಧುನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದರೂ, ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!